ಧರ್ಮೋಪದೇಶಕಾಂಡ 29:28 - ಪರಿಶುದ್ದ ಬೈಬಲ್28 ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.