Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:29 - ಪರಿಶುದ್ದ ಬೈಬಲ್‌

29 “ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:29
30 ತಿಳಿವುಗಳ ಹೋಲಿಕೆ  

ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.


ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ಪವಿತ್ರ ಗ್ರಂಥವು ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?” ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.


ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.


ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.


ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.”


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ.


ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.


ಯೇಸು, “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.


ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು