ಧರ್ಮೋಪದೇಶಕಾಂಡ 29:5 - ಪರಿಶುದ್ದ ಬೈಬಲ್5 ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಮೈಮೇಲಿದ್ದ ಬಟ್ಟೆಗಳು ಹರಿದುಹೋಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾಲ್ಪತ್ತು ವರುಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡಿಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ ಕಾಲಲ್ಲಿದ್ದ ಕೆರವಾಗಲಿ ಜೀರ್ಣವಾಗಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.