Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:8 - ಪರಿಶುದ್ದ ಬೈಬಲ್‌

8 ನಾವು ಅವರ ದೇಶವನ್ನು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರಿಗೆ ಹಂಚಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದವರಲ್ಲಿ ಅರ್ಧಜನರಿಗೂ ಸೊತ್ತಾಗಿ ಕೊಟ್ಟೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದವರಲ್ಲಿ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟೆವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:8
9 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.


ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು.


ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.


“ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು