Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:1 - ಪರಿಶುದ್ದ ಬೈಬಲ್‌

1 “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:1
15 ತಿಳಿವುಗಳ ಹೋಲಿಕೆ  

“ನಾವು ಈ ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು.


ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)


ಆತನು ಬಾಷಾನಿನ ರಾಜನಾದ ಓಗನನ್ನು ಸೋಲಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.


ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.


ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.


ಅವರು ಬಾಷಾನಿನ ಅರಸನಾದ ಓಗನನ್ನು ಸಹ ಸೋಲಿಸಿದರು. ಓಗನು ರೆಫಾಯರ ವಂಶಸ್ಥನಾಗಿದ್ದನು. ಅಷ್ಟರೋತ್ ಮತ್ತು ಎದ್ರೈ ಎಂಬ ನಗರಗಳಲ್ಲಿ ವಾಸವಾಗಿದ್ದ


ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.


“ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.


ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಓಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಈ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು.


ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.


“ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು.


ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು