Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:16 - ಪರಿಶುದ್ದ ಬೈಬಲ್‌

16 ರೂಬೇನ್ ಮತ್ತು ಗಾದ್ ಕುಲಗಳವರಿಗೆ ಗಿಲ್ಯಾದಿನಿಂದ ಪ್ರಾರಂಭವಾಗುವ ಪ್ರಾಂತ್ಯವನ್ನು ಕೊಟ್ಟೆನು. ಇದು ಅರ್ನೋನ್ ಕಣಿವೆಯಿಂದಿಡಿದು ಯಬ್ಬೋಕ್ ಹೊಳೆಯ ತನಕ ವಿಸ್ತಾರವಾಗಿದೆ. ಯಬ್ಬೋಕ್ ಹೊಳೆಯು ಅಮ್ಮೋನಿಯರ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 (ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಗಿಲ್ಯಾದ್ ಮೊದಲುಗೊಂಡು (ದಕ್ಷಿಣ ಕಡೆಯಲ್ಲಿ) ಅರ್ನೋನ್ ತಗ್ಗಿನವರೆಗೂ (ಪೂರ್ವ ಕಡೆಯಲ್ಲಿ) ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆ. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ದಕ್ಷಿಣ ಎಲ್ಲೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಪೂರ್ವದಿಕ್ಕಿನ ಎಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಿಲ್ಯಾದ್ ಮೊದಲುಗೊಂಡು [ದಕ್ಷಿಣಕಡೆಯಲ್ಲಿ] ಅರ್ನೋನ್ ತಗ್ಗಿನವರೆಗೂ [ಪೂರ್ವಕಡೆಯಲ್ಲಿ] ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ [ದಕ್ಷಿಣ] ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ [ಪೂರ್ವದಿಕ್ಕಿನ] ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:16
6 ತಿಳಿವುಗಳ ಹೋಲಿಕೆ  

ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.


ಅವರು ಜೋರ್ಡನ್ ನದಿಯನ್ನು ದಾಟಿ ಅರೋಯೇರಿನಲ್ಲಿ ಪಾಳೆಯ ಮಾಡಿಕೊಂಡರು. ಅವರ ಪಾಳೆಯವು ನಗರದ ಬಲ ಅಂಚಿನಲ್ಲಿತ್ತು. (ಆ ನಗರವು ಗಾದ್ ಕಣಿವೆಯ ಮಧ್ಯಭಾಗದಲ್ಲಿಯೂ ಯಗ್ಜೇರಿನ ಮಾರ್ಗದಲ್ಲಿಯೂ ಇತ್ತು.)


ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.


ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು