Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:17 - ಪರಿಶುದ್ದ ಬೈಬಲ್‌

17 ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಲ್ಲದೆ ಅರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರ ಮೊದಲುಗೊಂಡು ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣ ಸಮುದ್ರದವರೆಗೆ ಯೊರ್ದನ್ ಹೊಳೆಯು ಅವರ [ಪಶ್ಚಿಮ] ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:17
16 ತಿಳಿವುಗಳ ಹೋಲಿಕೆ  

ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.


ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ್ಯು ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.


ಅಲ್ಲಿಂದ ಆ ಮೇರೆಯು ಬೇತ್‌ಹೊಗ್ಲಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.


ಅವರ ಪ್ರದೇಶದ ಪೂರ್ವದಿಕ್ಕಿನ ಸೀಮೆ ಮೃತ್ಯುಸಾಗರದ ದಂಡೆಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು. ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಮೃತ್ಯುಸಾಗರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ


ಯೆಹೂದ್ಯರ ಸ್ವಾಸ್ತ್ಯವು ಲವಣಸಮುದ್ರದ ದಕ್ಷಿಣ ತೀರದಿಂದ ಆರಂಭವಾಗಿತ್ತು.


ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.


ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು