Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:18 - ಪರಿಶುದ್ದ ಬೈಬಲ್‌

18 “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:18
18 ತಿಳಿವುಗಳ ಹೋಲಿಕೆ  

ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.


ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’


“ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.


ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು.


“ನಿಮಗೆ ಸಿಗುವ ಹೊಸ ದೇಶದಲ್ಲಿ ಈ ಕಟ್ಟಳೆಗಳನ್ನು ನೀವು ಅನುಸರಿಸಬೇಕು. ನೀವು ಭೂಮಿಯ ಮೇಲೆ ಜೀವಿಸುವವರೆಗೆ ಆ ಕಟ್ಟಳೆಗಳನ್ನು ತಪ್ಪದೇ ಅನುಸರಿಸಬೇಕು. ನಮ್ಮ ಯೆಹೋವನು ನಮ್ಮ ಪೂರ್ವಿಕರ ದೇವರಾಗಿದ್ದಾನೆ. ಆತನೇ ಈ ದೇಶವನ್ನು ನಿಮಗೆ ಕೊಡುತ್ತಿದ್ದಾನೆ.


ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.


ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು.


ಆದ್ದರಿಂದ ಆ ನಗರಗಳು ಎಲ್ಲರಿಗೂ ಸುಲಭವಾಗಿ ಸೇರುವಂಥವುಗಳಾಗಿರಬೇಕು; ಅಂಥವುಗಳನ್ನು ನೀವು ಆರಿಸಿಕೊಳ್ಳಬೇಕು.


“ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,


ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.


“ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.


ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು