Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:19 - ಪರಿಶುದ್ದ ಬೈಬಲ್‌

19 ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲಿ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ವಾಸಿಸಬೇಕು; (ನಿಮಗೆ ಪಶುಗಳು ಹೆಚ್ಚಾಗಿವೆ ಎಂದು ನನಗೆ ಗೊತ್ತುಂಟು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮಗೆ ಬಹಳ ದನಕುರಿಗಳುಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಸರ್ವೇಶ್ವರ ಜೋರ್ಡನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ನಾಡು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಮಡದಿ ಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮಗೆ ಬಹಳ ದನಕುರಿಗಳುಂಟೆಂಬದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ಹೊಳೆಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:19
4 ತಿಳಿವುಗಳ ಹೋಲಿಕೆ  

ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.


ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.


ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು.


ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು