Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:24 - ಪರಿಶುದ್ದ ಬೈಬಲ್‌

24 ನಾನು, ‘ಯೆಹೋವನೇ, ನನ್ನ ಒಡೆಯನೇ, ನಾನು ನಿನ್ನ ಸೇವಕ. ನಿನ್ನ ತ್ರಾಣವುಳ್ಳ ಹಸ್ತದಿಂದ ಮಾಡಿದ ಪರಾಕ್ರಮದ ಕಾರ್ಯಗಳನ್ನು ನೀನು ನನಗೆ ಸ್ವಲ್ಪ ಮಟ್ಟಿಗೆ ತೋರಿಸಿರುವೆ. ನೀನು ಮಾಡಿದ ಮಹಾಕೃತ್ಯಗಳನ್ನು ಮಾಡಲು ಪರಲೋಕದ ಅಥವಾ ಭೂಲೋಕದ ಯಾವ ದೇವರುಗಳಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:24
25 ತಿಳಿವುಗಳ ಹೋಲಿಕೆ  

“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ನಿಮಗೆ ಉಪದೇಶ ಮಾಡುವುದಕ್ಕಾಗಿ ನಿಮ್ಮ ದೇವರಾದ ಯೆಹೋವನು ಮಾಡಿದ ಮಹತ್ಕಾರ್ಯಗಳನ್ನು ನೆನಪುಮಾಡಿರಿ. ಆತನ ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಆತನು ಎಂಥಾ ಶಕ್ತಿಶಾಲಿ ಎಂದು ನೀವು ತಿಳಿದಿದ್ದೀರಿ.


ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು.


ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.


ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು.


ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.


ಪರಿಶುದ್ಧನಾದ ದೇವರು ಹೇಳುವುದೇನೆಂದರೆ: “ನನ್ನನ್ನು ಯಾರಿಗಾದರೂ ಹೋಲಿಸಲು ಸಾಧ್ಯವೇ? ನನಗೆ ಸಮಾನರು ಯಾರೂ ಇಲ್ಲ.”


ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.


ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ.


ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ನಮ್ಮ ಸಂಪೂರ್ಣಭರವಸೆಗೆ ಯೋಗ್ಯನಾಗಿರುವೆ.


ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು.


ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?


ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


“ನಾನು ನನ್ನ ಮನವಿಯನ್ನು ನೆರವೇರಿಸಲು ಯೆಹೋವನನ್ನು ಬೇಡಿಕೊಂಡೆನು.


ಯೆಹೋವನ ಹೆಸರಿನಲ್ಲಿ ಮಾತಾಡುವಂತೆ ಮಾಡಿದ ದೇವರಿಗೆ ಸ್ತೋತ್ರ!


“ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.


ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!


ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು