Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:27 - ಪರಿಶುದ್ದ ಬೈಬಲ್‌

27 ನೀನು ಪಿಸ್ಗಾ ಬೆಟ್ಟವನ್ನು ಹತ್ತಿ ಉತ್ತರ, ಪಶ್ಚಿಮ, ಪೂರ್ವ, ದಕ್ಷಿಣ ದಿಕ್ಕುಗಳ ಕಡೆಗೆ ನೋಡು ಮತ್ತು ಆನಂದಿಸು. ಆದರೆ ನೀನು ಜೋರ್ಡನ್ ನದಿ ದಾಟಿ ಆ ಪ್ರದೇಶಗಳನ್ನು ಪ್ರವೇಶಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ, ತುದಿಯಲ್ಲಿ ನಿಂತು, ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ನಾಡನ್ನು ಕಣ್ಣು ತುಂಬಾ ನೋಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:27
9 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು.


ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


“ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


“ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.


ಆದ್ದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡುವೆ, ಆದರೆ ಅದನ್ನು ಪ್ರವೇಶಿಸುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು