ಧರ್ಮೋಪದೇಶಕಾಂಡ 3:28 - ಪರಿಶುದ್ದ ಬೈಬಲ್28 ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.