ಧರ್ಮೋಪದೇಶಕಾಂಡ 3:5 - ಪರಿಶುದ್ದ ಬೈಬಲ್5 ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು. ಅಧ್ಯಾಯವನ್ನು ನೋಡಿ |
ಫಿಲಿಷ್ಟಿಯರು ಚಿನ್ನದ ಇಲಿಗಳನ್ನೂ ಕಳುಹಿಸಿದ್ದರು. ಫಿಲಿಷ್ಟಿಯರ ಐದು ಅಧಿಪತಿಗಳಿಗೆ ಸೇರಿದ್ದ ಐದು ಪಟ್ಟಣಗಳ ಸಂಖ್ಯೆಗನುಸಾರವಾಗಿ ಈ ಇಲಿಗಳಿದ್ದವು. ಈ ಪಟ್ಟಣಗಳ ಸುತ್ತ ಗೋಡೆಗಳಿದ್ದು ಹಳ್ಳಿಗಳು ಈ ಪಟ್ಟಣಗಳನ್ನು ಸುತ್ತುವರಿದಿದ್ದವು. ಬೇತ್‌ಷೆಮೆಷಿನ ಜನರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಒಂದು ಕಲ್ಲಿನ ಮೇಲಿಟ್ಟರು. ಬೇತ್‌ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಆ ಕಲ್ಲು ಈಗಲೂ ಇದೆ.
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.