Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:9 - ಪರಿಶುದ್ದ ಬೈಬಲ್‌

9 (ಚೀದೋನಿನ ಜನರು ಹೆರ್ಮೋನ್ ಪರ್ವತವನ್ನು ಸಿರ್ಯೋನ್ ಎಂದು ಕರೆಯುವರು. ಆದರೆ ಅಮೋರಿಯರು ಅದನ್ನು ಸೆನೀರ್ ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 (ಹೆರ್ಮೋನ್ ಪರ್ವತಕ್ಕೆ ಸಿದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:9
9 ತಿಳಿವುಗಳ ಹೋಲಿಕೆ  

ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.


ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್‌ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು.


ನಿನ್ನನ್ನು ಕಟ್ಟಿದವರು ಸೆನೀರ್ ಬೆಟ್ಟದ ತುರಾಯಿ ಮರಗಳನ್ನು ಹಲಗೆಗಳಿಗಾಗಿ ಉಪಯೋಗಿಸಿದರು. ಲೆಬನೋನಿನ ದೇವದಾರು ಮರವನ್ನು ಹಾಯಿ ಮರವನ್ನಾಗಿ ಉಪಯೋಗಿಸಿದರು.


ನನ್ನ ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿಯಿಂದಲೂ ಶೆನೀರಿನ ತುದಿಯಿಂದಲೂ ಹೆರ್ಮೋನಿನ ತುದಿಯಿಂದಲೂ ಸಿಂಹದ ಗವಿಗಳಿಂದಲೂ ಚಿರತೆಗಳ ಬೆಟ್ಟಗಳಿಂದಲೂ ಬಾ!


ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.


ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.


ಸೇಯೀರಿನ ಹತ್ತಿರವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಆ ಪ್ರದೇಶದ ಎಲ್ಲ ಅರಸರನ್ನು ಸೆರೆಹಿಡಿದು ಕೊಂದುಹಾಕಿದನು.


ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು