ಧರ್ಮೋಪದೇಶಕಾಂಡ 30:1 - ಪರಿಶುದ್ದ ಬೈಬಲ್1 “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.