ಧರ್ಮೋಪದೇಶಕಾಂಡ 30:12 - ಪರಿಶುದ್ದ ಬೈಬಲ್12 ಈ ಆಜ್ಞೆಯು ಆಕಾಶದೊಳಗೆ ಇಲ್ಲ, ‘ನಮಗೋಸ್ಕರ ಮೇಲಿನ ಲೋಕವನ್ನೇರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಯಪಡಿಸುವವನು ಯಾರು? ನಾವು ಅದನ್ನು ಕೇಳಿ ಅದರಂತೆಯೇ ಮಾಡುತ್ತಿದ್ದೆವು’ ಎಂದು ವಿಚಾರಿಸುವ ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದು ಮೇಲಣ ಲೋಕದಲ್ಲಿರುವ ಮಾತಲ್ಲ. “ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದು ಮೇಲಣ ಲೋಕದಲ್ಲಿರುವ ಮಾತಲ್ಲ, ‘ನಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದು ಮೇಲಣ ಲೋಕದಲ್ಲಿರುವ ಮಾತಲ್ಲ. ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು ಅಂದುಕೊಳ್ಳುವದಕ್ಕೆ ಅವಕಾಶವೇನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ. ಅಧ್ಯಾಯವನ್ನು ನೋಡಿ |