Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:16 - ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದು ಆತನ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:16
15 ತಿಳಿವುಗಳ ಹೋಲಿಕೆ  

ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,


“ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.


ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


“ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು