ಧರ್ಮೋಪದೇಶಕಾಂಡ 30:2 - ಪರಿಶುದ್ದ ಬೈಬಲ್2 ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯಕ್ಕೆ ಮರಳಿಬಂದು ನಾನು ಈಗ ನಿಮಗೆ ಬೋಧಿಸುವ ಅವರ ಮಾತುಗಳಿಗೆ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾಗಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರಿಗಿ ಬಂದು ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.