ಧರ್ಮೋಪದೇಶಕಾಂಡ 30:20 - ಪರಿಶುದ್ದ ಬೈಬಲ್20 ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.