Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:3 - ಪರಿಶುದ್ದ ಬೈಬಲ್‌

3 ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:3
33 ತಿಳಿವುಗಳ ಹೋಲಿಕೆ  

ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.


ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಸಿಯೋನಿನಿಂದ ರಕ್ಷಕನು ಬರುವನು: ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು; ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.


ಆ ಸಮಯದಲ್ಲಿ, ಯೆಹೋವನು ತನ್ನ ಜನರನ್ನು ಬೇರೆಯವರಿಂದ ಬೇರ್ಪಡಿಸುವನು. ಆತನು ಯೂಫ್ರೇಟೀಸ್ ನದಿಯಿಂದ ಪ್ರಾರಂಭಿಸಿ ಈಜಿಪ್ಟಿನ ನದಿಯತನಕ ಎಲ್ಲಾ ಜನರನ್ನು ಒಟ್ಟುಗೂಡಿಸುವನು. ಇಸ್ರೇಲ್ ಜನರೇ, ನೀವು ಒಬ್ಬೊಬ್ಬರಾಗಿಯೇ ಒಟ್ಟುಗೂಡಿಸಲ್ಪಡುವಿರಿ.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


“ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ.


“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.


ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.


ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು