Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:5 - ಪರಿಶುದ್ದ ಬೈಬಲ್‌

5 ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಪಿತೃಗಳಿಗೆ ಸ್ವಾಸ್ತ್ಯವಾಗಿದ್ದ ದೇಶದಲ್ಲಿ ಸೇರಿಸಿ ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಮೇಲನ್ನುಂಟುಮಾಡಿ ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:5
9 ತಿಳಿವುಗಳ ಹೋಲಿಕೆ  

ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು