ಧರ್ಮೋಪದೇಶಕಾಂಡ 30:6 - ಪರಿಶುದ್ದ ಬೈಬಲ್6 ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”