ಧರ್ಮೋಪದೇಶಕಾಂಡ 31:11 - ಪರಿಶುದ್ದ ಬೈಬಲ್11 ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡ ಸ್ಥಳದಲ್ಲಿ, ಇಸ್ರಯೇಲರೆಲ್ಲರು ಅವರ ಸನ್ನಿಧಿಗೆ ಕೂಡಿಬಂದಾಗ ಅವರೆಲ್ಲರಿಗೂ ಕೇಳಿಸುವಂತೆ ನೀವು ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು. ಅಧ್ಯಾಯವನ್ನು ನೋಡಿ |