Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:13 - ಪರಿಶುದ್ದ ಬೈಬಲ್‌

13 ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಹೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರು ಸಹ ಇವನ್ನು ಕೇಳಿ, ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ವಾಸವಾಗಿರುವವರೆಗೂ, ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಲು ಕಲಿತುಕೊಳ್ಳುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಕಲಿತುಕೊಳ್ಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:13
11 ತಿಳಿವುಗಳ ಹೋಲಿಕೆ  

ನಿಮಗೆ ಉಪದೇಶ ಮಾಡುವುದಕ್ಕಾಗಿ ನಿಮ್ಮ ದೇವರಾದ ಯೆಹೋವನು ಮಾಡಿದ ಮಹತ್ಕಾರ್ಯಗಳನ್ನು ನೆನಪುಮಾಡಿರಿ. ಆತನ ಕಾರ್ಯಗಳನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಆತನು ಎಂಥಾ ಶಕ್ತಿಶಾಲಿ ಎಂದು ನೀವು ತಿಳಿದಿದ್ದೀರಿ.


ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.


ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದು ತಂದಾಗ, ಈ ಪರ್ಣಶಾಲೆಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!”


ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು