Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:14 - ಪರಿಶುದ್ದ ಬೈಬಲ್‌

14 ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:14
29 ತಿಳಿವುಗಳ ಹೋಲಿಕೆ  

ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ.


ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.


ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.


ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.


ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು.


ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ನಾಳೆ ಮುಂಜಾನೆ ಸೀನಾಯಿ ಬೆಟ್ಟಕ್ಕೇರಿ ಬಾ. ಬೆಟ್ಟದ ಮೇಲೆ ನನ್ನೆದುರಿನಲ್ಲಿ ನಿಂತುಕೊ.


ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.


ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು.


ಆದ್ದರಿಂದ ನಾನು ಇದೇ ದೇಶದಲ್ಲಿ ಸಾಯುವೆನು. ಆದರೆ ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ಆ ಒಳ್ಳೆಯ ದೇಶವನ್ನು ವಶಪಡಿಸಿಕೊಂಡು ಅಲ್ಲಿ ವಾಸಿಸುವಿರಿ.


ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಹೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.”


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ,


ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ಆ ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು