ಧರ್ಮೋಪದೇಶಕಾಂಡ 31:17 - ಪರಿಶುದ್ದ ಬೈಬಲ್17 ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು. ಅಧ್ಯಾಯವನ್ನು ನೋಡಿ |
ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”