Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:21 - ಪರಿಶುದ್ದ ಬೈಬಲ್‌

21 ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:21
16 ತಿಳಿವುಗಳ ಹೋಲಿಕೆ  

ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವೆ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ


ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.


ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು