Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:23 - ಪರಿಶುದ್ದ ಬೈಬಲ್‌

23 ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:23
15 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.


ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.


ಯೆಹೋವನ ಕಟ್ಟಳೆ, ವಿಧಿನಿಯಮಗಳ ಬೋಧನೆಯನ್ನೆಲ್ಲಾ ಮೋಶೆಯು ಪುಸ್ತಕದಲ್ಲಿ ಜಾಗ್ರತೆಯಾಗಿ ಬರೆದಿಟ್ಟನು.


“ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು.


ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು