Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:27 - ಪರಿಶುದ್ದ ಬೈಬಲ್‌

27 ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:27
18 ತಿಳಿವುಗಳ ಹೋಲಿಕೆ  

ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.


“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.


“ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು.


ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.


ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು.


ಆದರೆ ನೀವು ಯೆಹೋವನಿಗೆ ವಿಧೇಯರಾಗಿ ನಡೆಯದಿದ್ದರೆ ಮತ್ತು ಆತನ ಆಜ್ಞೆಗಳನ್ನು ವಿರೋಧಿಸಿದರೆ, ಆತನು ನಿಮ್ಮ ಪೂರ್ವಿಕರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವನು.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು.


ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.


ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿಂದ ತಿರುಗಿ ಬಹಳ ದೂರ ಹೋಗಿಬಿಟ್ಟಿದ್ದಾರೆ.


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು