Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:29 - ಪರಿಶುದ್ದ ಬೈಬಲ್‌

29 ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:29
28 ತಿಳಿವುಗಳ ಹೋಲಿಕೆ  

ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.


ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.


ಆದ್ದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲಿ


ಇಸ್ರೇಲ್ ಸಮೂಹವು ಒಟ್ಟಾಗಿ ಸೇರಿದಾಗ ಮೋಶೆಯು ಹೀಗೆ ಹಾಡಿದನು:


ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ದಾನಿಯೇಲನೇ, ಭವಿಷ್ಯದಲ್ಲಿ ನಿನ್ನ ಜನರಿಗೆ ಏನಾಗುವದೆಂಬುದನ್ನು ನಿನಗೆ ವಿವರಿಸಲು ನಾನು ಈಗ ಇಲ್ಲಿಗೆ ಬಂದೆನು. ಈ ಕನಸು ಭವಿಷ್ಯದ ಒಂದು ಕಾಲದ ಕುರಿತಾಗಿದೆ” ಎಂದು ಹೇಳಿದನು.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು