ಧರ್ಮೋಪದೇಶಕಾಂಡ 31:3 - ಪರಿಶುದ್ದ ಬೈಬಲ್3 ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು. ಅಧ್ಯಾಯವನ್ನು ನೋಡಿ |
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.