Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:7 - ಪರಿಶುದ್ದ ಬೈಬಲ್‌

7 ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:7
18 ತಿಳಿವುಗಳ ಹೋಲಿಕೆ  

ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.


ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”


ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ಅವನನ್ನು ನಿಲ್ಲಿಸು. ಅವರ ಎದುರಿನಲ್ಲಿಯೇ ಅವನಿಗೆ ಆದೇಶಗಳನ್ನು ಕೊಡು.


“ಆದ್ದರಿಂದ ನಾನು ನಿಮಗೆ ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


“ಎಲ್ಲರಂತೆ ನನಗೂ ಸಾಯುವ ಕಾಲ ಸಮೀಪಿಸಿತು. ನೀನಾದರೋ ಬಲಿಷ್ಠನಾಗಿರು; ಧೈರ್ಯವಂತನಾಗಿರು.


ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”


ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.


ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು