Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:9 - ಪರಿಶುದ್ದ ಬೈಬಲ್‌

9 ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:9
29 ತಿಳಿವುಗಳ ಹೋಲಿಕೆ  

“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


“ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.


ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ.


ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


“ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ.


“ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.


“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.


ಇಸ್ರೇಲಿನ ಹಿರಿಯರೆಲ್ಲರು ಆ ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು.


ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಪುನಃ ಹೊತ್ತುಕೊಂಡು ಹೋದರು.


ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.


“ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.


ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.


ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.


“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.


ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.


ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.


ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು