ಧರ್ಮೋಪದೇಶಕಾಂಡ 32:10 - ಪರಿಶುದ್ದ ಬೈಬಲ್10 “ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಅವರನ್ನು ಶೂನ್ಯವೂ ಭಯಂಕರವೂ ಆಗಿರುವ ಮರಳುಕಾಡಿನಲ್ಲಿ ಕಂಡು ಪರಾಮರಿಸಿ ಪ್ರೀತಿಯಿಂದ ಆವರಿಸಿಕೊಂಡು ಕಣ್ಣುಗುಡ್ಡಿನಂತೆ ಕಾಪಾಡಿದ್ದೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”