ಧರ್ಮೋಪದೇಶಕಾಂಡ 32:11 - ಪರಿಶುದ್ದ ಬೈಬಲ್11 ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ, ಅಧ್ಯಾಯವನ್ನು ನೋಡಿ |
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”