ಧರ್ಮೋಪದೇಶಕಾಂಡ 32:16 - ಪರಿಶುದ್ದ ಬೈಬಲ್16 ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”