ಧರ್ಮೋಪದೇಶಕಾಂಡ 32:17 - ಪರಿಶುದ್ದ ಬೈಬಲ್17 ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.