Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:18 - ಪರಿಶುದ್ದ ಬೈಬಲ್‌

18 ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಇಸ್ರಾಯೇಲ್ಯರೇ,] ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ನೆನಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:18
19 ತಿಳಿವುಗಳ ಹೋಲಿಕೆ  

ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


“ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


“ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.


“ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು