Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:20 - ಪರಿಶುದ್ದ ಬೈಬಲ್‌

20 ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು - ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಮಾಡದವರೂ ದ್ರೋಹಿಗಳಾದ ಮಕ್ಕಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:20
25 ತಿಳಿವುಗಳ ಹೋಲಿಕೆ  

ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.


ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)


ಕಾದೇಶ್‌ಬರ್ನೇಯದಿಂದ ಹೊರಡಲು ಆತನು ನಿಮಗೆ ಹೇಳಿದಾಗ ನೀವು ಆತನಿಗೆ ವಿಧೇಯರಾಗಲಿಲ್ಲ. ಆತನು ನಿಮಗೆ, ‘ನೀವು ಬೆಟ್ಟಪ್ರದೇಶವನ್ನು ಹತ್ತಿಹೋಗಿ ನಾನು ನಿಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳಿ’ ಎಂದು ಹೇಳಿದಾಗ ನಿಮ್ಮ ದೇವರಾದ ಯೆಹೋವನಿಗೆ ವಿಧೇಯರಾಗಲಿಲ್ಲ. ನೀವು ಆತನಲ್ಲಿ ಭರವಸೆ ಇಡಲಿಲ್ಲ. ನೀವು ಆತನ ಆಜ್ಞೆಗೆ ಕಿವಿಗೊಡಲಿಲ್ಲ.


ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು