ಧರ್ಮೋಪದೇಶಕಾಂಡ 32:22 - ಪರಿಶುದ್ದ ಬೈಬಲ್22 ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”