ಧರ್ಮೋಪದೇಶಕಾಂಡ 32:23 - ಪರಿಶುದ್ದ ಬೈಬಲ್23 “‘ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು. ನನ್ನ ಬಾಣಗಳನ್ನೆಲ್ಲಾ ಅದಕ್ಕೆ ಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.