ಧರ್ಮೋಪದೇಶಕಾಂಡ 32:24 - ಪರಿಶುದ್ದ ಬೈಬಲ್24 ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.