ಧರ್ಮೋಪದೇಶಕಾಂಡ 32:25 - ಪರಿಶುದ್ದ ಬೈಬಲ್25 ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.