Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:30 - ಪರಿಶುದ್ದ ಬೈಬಲ್‌

30 ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:30
21 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.


ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.


ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.


ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.


ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.”


ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.


ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


“ದೇವರು ನಿನ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಎಳೆದುಕೊಂಡು ಬರುವುದಾದರೆ ಆತನನ್ನು ತಡೆಯಬಲ್ಲವರು ಯಾರು?


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.


ದೇವರು ನನ್ನನ್ನು ದುಷ್ಟರಿಗೆ ಕೊಟ್ಟುಬಿಟ್ಟಿದ್ದಾನೆ. ನನಗೆ ಕೇಡುಮಾಡಲು ಕೆಡುಕರಿಗೆ ಬಿಟ್ಟುಕೊಟ್ಟಿದ್ದಾನೆ.


“ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಇವರೆಲ್ಲಾ ಗಾದ್ಯರ ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಅತಿಬಲಹೀನನಾದವನು ನೂರು ಮಂದಿ ವೈರಿಗಳೊಂದಿಗೆ ಕಾದಾಡಲು ಶಕ್ತನಾಗಿದ್ದನು. ಅವರಲ್ಲಿ ಎಲ್ಲರಿಗಿಂತ ಪರಾಕ್ರಮಿಯು ಒಂದು ಸಾವಿರ ವೈರಿಗಳೊಂದಿಗೆ ಕಾದಾಡಲು ಶಕ್ತನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು