Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:36 - ಪರಿಶುದ್ದ ಬೈಬಲ್‌

36 “ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:36
24 ತಿಳಿವುಗಳ ಹೋಲಿಕೆ  

ಯೆಹೋವನು ಜನಾಂಗಗಳನ್ನು ದಂಡಿಸಿದನು. ತನ್ನ ಜನರಿಗಾದರೋ ಕರುಣೆಯುಳ್ಳವನಾಗಿದ್ದನು.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.


ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.


“ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.


ಆಗ ದೇವರಾದ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ, “ಇದು ಕೂಡಾ ನೆರವೇರದು” ಎಂದು ಹೇಳಿದನು.


ಆಗ ಯೆಹೋವನು ತನ್ನ ನಿರ್ಧಾರವನ್ನು ಬದಲಿಸಿ ಹೀಗೆಂದನು, “ಅದು ನೆರವೇರುವುದಿಲ್ಲ.”


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.


ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.


ಅಹಾಬನ ಕುಟುಂಬವೆಲ್ಲ ಸಾಯುತ್ತದೆ. ಅಹಾಬನ ಕುಟುಂಬದಲ್ಲಿ ಒಬ್ಬ ಗಂಡಸಾದರೂ ಜೀವಿಸಿರಲು ನಾನು ಬಿಡುವುದಿಲ್ಲ. ಆ ಗಂಡಸು ಇಸ್ರೇಲಿನಲ್ಲಿ ಸ್ವತಂತ್ರವಾಗಿರಲಿ ಇಲ್ಲವೆ ಗುಲಾಮನಾಗಿರಲಿ ಅದು ನನಗೆ ಮುಖ್ಯವಲ್ಲ.


ಆದ್ದರಿಂದ ಯೆಹೋವನು ನಿನಗೆ, ‘ನಾನು ನಿನ್ನನ್ನು ನಾಶಪಡಿಸುತ್ತೇನೆ. ನಿನ್ನನ್ನು ಮತ್ತು ನಿನ್ನ ಕುಟುಂಬದ ಪ್ರತಿಯೊಬ್ಬ ಗಂಡಸರನ್ನು ನಾನು ಕೊಂದುಹಾಕುತ್ತೇನೆ.


“ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.


‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.


ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.


ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸಿದನು. ತನ್ನ ಜನರ ಬಗ್ಗೆ ದುಃಖಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು