ಧರ್ಮೋಪದೇಶಕಾಂಡ 32:37 - ಪರಿಶುದ್ದ ಬೈಬಲ್37 ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅಧ್ಯಾಯವನ್ನು ನೋಡಿ |
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.