ಧರ್ಮೋಪದೇಶಕಾಂಡ 32:39 - ಪರಿಶುದ್ದ ಬೈಬಲ್39 “‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 “ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.