ಧರ್ಮೋಪದೇಶಕಾಂಡ 32:41 - ಪರಿಶುದ್ದ ಬೈಬಲ್41 ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |
“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.
ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.