ಧರ್ಮೋಪದೇಶಕಾಂಡ 32:42 - ಪರಿಶುದ್ದ ಬೈಬಲ್42 ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ನನ್ನ ಬಾಣಗಳು ರಕ್ತವನ್ನು ಕುಡಿಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚಂಡಾಡುವದು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.” ಅಧ್ಯಾಯವನ್ನು ನೋಡಿ |
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.