ಧರ್ಮೋಪದೇಶಕಾಂಡ 32:43 - ಪರಿಶುದ್ದ ಬೈಬಲ್43 “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 “ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು. ಅಧ್ಯಾಯವನ್ನು ನೋಡಿ |